ಬೆಂಗಳೂರು : HMPV ವೈರಸ್ ಭಾರತಕ್ಕೂ ಬಂದಿದ್ದು, ಈಗ ಇಂದು ಬೆಂಗಳೂರಿನಲ್ಲಿ 8 ತಿಂಗಳ ಮಗು ಹಾಗೂ 3 ತಿಂಗಳ ಮಕ್ಕಳಲ್ಲಿ ಈ ಒಂದು ವೈರಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆರೋಗ್ಯ ಇಲಾಖೆಗೆ ಎಲ್ಲಾ ರೀತಿಯ ಮುಂಜಾಗೃತ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಮೊದಲ ಪ್ರತಿಕ್ರಿಯೆ ನೀಡಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದು ಅದಕ್ಕೋಸ್ಕರ ಆರೋಗ್ಯ ಸಚಿವ ದಿನೇಶ್ ಗುಂಡೂರ ಸಭೆ ಕರೆದಿದ್ದಾರೆ. ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದು ಅಪಾಯಕಾರಿ ವೈರಸ್ ಅಲ್ಲ ಎಂದರು.
ಇದೊಂದು ಚೀನಾ ವೈರಸ್ ಆಗಿದ್ದು, ಕರ್ನಾಟಕಕ್ಕೆ ಬಂದಿದೆ ಎಂದು ಮಾಹಿತಿ ಸಿಕ್ಕಿದೆ.ಅದಕ್ಕೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಜೊತೆಗೆ ಮಾತನಾಡಿದ್ದು ಈಗಾಗಲೇ ಸಭೆ ಕರೆದು ಅಧಿಕಾರಿಗಳೊಂದಿಗೆ ಚರ್ಚಿಸುತ್ತಿದ್ದಾರೆ.
ಬೆಂಗಳೂರಲ್ಲಿ 8 ತಿಂಗಳ ಹಾಗೂ 3 ತಿಂಗಳ ಮಗುವಿನಲ್ಲಿ ವೈರಸ್ ಕಾಣಿಸಿಕೊಂಡಿದೆ. ಇದು ಅಂತಹ ಅಪಾಯಕಾರಿ ವೈರಸ್ ಏನಲ್ಲ ಆದರೂ ಕೂಡ ಮಂಜಾಗ್ರತಾ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.