ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆ ಕುರಿತು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ , ನಾನು ಸಚಿವ ಬಿ. ನಾಗೇಂದ್ರ ಅವರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿಲ್ಲ. ಸಚಿವರನ್ನು ಕರೆದು ಮಾತನಾಡಿದ್ದೇನೆ. ಎಸ್ ಐಟಿ ರಚನೆ ಮಾಡಿದ್ದೇವೆ. ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವನೆ ಪ್ರಕರಣದಲ್ಲಿ ಸಿಬಿಐ ತನಿಖೆ ಆರಂಭಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಸುವಂತೆ ಸಚಿವ.ಬಿ.ನಾಗೇಂದ್ರಗೆ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು. ಆದರೆ ಇದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.