ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ತಪ್ಪು ಮಾಡಿಲ್ಲ. ತನಿಖೆಯನ್ನು ಎದುರಿಸುತ್ತೇನೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ತಪ್ಪನ್ನು ಮಾಡಿಲ್ಲ. ಯಾವ ತನಿಖೆಯನ್ನೂ ಎದುರಿಸಲು ಸಿದ್ದನಾಗಿದ್ದೇನೆ. ಎಸ್ ಐಟಿ ಅಧಿಕಾರಿಗಳು ನಮ್ಮ ಮನೆಗೆ ನೋಟಿಸ್ ನೀಡಿದ್ದಾರೆ. ನೋಟಿಸ್ ನಲ್ಲಿ ಏನಿದೆ ಅಂತ ತಿಳಿದುಕೊಳ್ಳುತ್ತೇನೆ ಎಂದರು.
ಇದೆಲ್ಲಾ ಸುಳ್ಳಿನ ಆರೋಪ ಮಾಡಲಾಗಿದೆ. ನಾನು ಏನೂ ಮಾತನಾಡುವುದಿಲ್ಲ. ಷಡ್ಯಂತರ ಮಾಡಿದ್ದಾರೆ. ಇದನ್ನೆಲ್ಲಾ ನಾನು ಎದುರಿಸುತ್ತನೆ ನಾನು ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ.