ಮಂಡ್ಯ : ಭೂಗಳ್ಳರಿಂದ ಮಳವಳಿ ಶಾಸಕ ನರೇಂದ್ರ ಸ್ವಾಮಿಗೆ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಡ್ಯದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ನರೇಂದ್ರಸ್ವಾಮಿ ಈ ವಿಚಾರವಾಗಿ ಪ್ರಸ್ತಾಪಿಸಿದರು. ಸಚಿವ ಎನ್.ಚೆಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆದಿದೆ.
ಸುಮಾರು 2500 ಎಕರೆ ಸರ್ಕಾರಿ ಜಮೀನು ಕಬಳಿಕೆ ವಿರುದ್ಧ ನಾರಾಯಣಸ್ವಾಮಿ ಹೋರಾಟ ಮಾಡುತ್ತಿದ್ದರು. ಹೋರಾಟದ ಪರಿಣಾಮ ಕಬ್ಬಳಿಕೆಯಾಗಿದೆ 800 ಎಕರೆ ಭೂಮಿ ವಾಪಸ್ ಆಗಿದ್ದು, ಈ ಹಿನ್ನೆಲೆಯಲ್ಲಿ ಬೆದರಿಕೆ ಕೊಲೆ ಬರುತ್ತಿದೆ ಎಂದು ಶಾಸಕ ನರೇಂದ್ರ ಸ್ವಾಮಿ ಆರೋಪಿಸಿದ್ದಾರೆ. ಸಚಿವರು ಶಾಸಕರು ಅಧಿಕಾರಿಗಳ ಸಮ್ಮುಖದಲ್ಲಿ ಶಾಸಕ ಕುರಿತು ಪ್ರಸ್ತಾಪಿಸಿದ್ದಾರೆ. ಶಾಸಕ ಪಿಯು ನರೇಂದ್ರಸ್ವಾಮಿ ಹೇಳಿಕೆ ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸಮಯ ಬಂದಾಗ ದಾಖಲೆ ಬಿಡುಗಡೆ ಮಾಡುವುದಾಗಿ ನರೇಂದ್ರ ಸ್ವಾಮಿ ಹೇಳಿಕೆ ನೀಡಿದ್ದಾರೆ.