ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು, ಅದರಲ್ಲೂ ಸಿ ಎಂ ಬದಲಾವಣೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮಧ್ಯ ಪರೋಕ್ಷವಾಗಿ ಫೈಟ್ ನಡೆಯುತ್ತಿದೆ. ಇದರ ಮಧ್ಯ ನಾನು ಕೂಡ ಸಿಎಂ ಆಕಾಂಕ್ಷಿಯಾಗಿದ್ದೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಲ್ಲಿ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್, ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯ ವಿಚಾರಕ್ಕೆ ಸಂಬಂಧಪಟ್ಟಂತೆ, ನಾನು ಕೂಡ ಸಿಎಂ ಆಕಾಂಕ್ಷಿ ನನಗೂ ಸಿಎಂ ಆಗುವ ಆಸೆ ಇದೆ. ಆದರೆ ಈ ಸಂದರ್ಭ ಆ ರೀತಿ ಇಲ್ಲ ಸಿಎಂ ಬದಲಾವಣೆಯನ್ನು ವಿಚಾರ ಬಂದಾಗ ಆ ಕುರಿತು ವಿಚಾರ ಮಾಡೋಣ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.
ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ ಯಾರೋ ಯಾರದೋ ಮನೆಗೆ ಊಟಕ್ಕೆ ಹೋದರು ತಪ್ಪಾ, ಸತೀಶ್ ಜಾರಕಿಹೊಳಿಮನೆಯಲ್ಲಿ ಊಟಕ್ಕೆ ಸೇರಿ ಲಾಭವಾರು ಚರ್ಚೆ ಮಾಡುತ್ತೇವೆ ಹೌದು ಹಾಗೆ ಸೇರಿದಾಗ ರಾಜಕೀಯನು ಮಾತಾಡಿರ್ತೀವಿ ನಮ್ಮಲ್ಲಿ ಹೈಕಮಾಂಡ್ ಸ್ಟ್ರಾಂಗ್ ಇದೆ. ಇದುವರೆಗೂ ಲೀಡರ್ ಶಿಪ್ ಬದಲಾವಣೆಯ ಬಗ್ಗೆ ಹೈಕಮಾಂಡ್ ಹೇಳಿಲ್ಲ.
ಬೇರೆಯವರು ಮಾತನಾಡೋದಕ್ಕೆ ಬೆಲೆ ಇಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿರ್ತೀನಿ ಅಂತ ಹೇಳಿದ್ದಾರೆ. ಎರಡುವರೆ ವರ್ಷದ ಹಿಂದೆ ಸಿಎಲ್‍ಸಿ ಸಭೆಯಲ್ಲಿ ಆಯ್ಕೆಯಾಗಿದ್ದರು ಈ ನಡುವೆ ಬದಲಾವಣೆ ಮಾಡುವುದು ಹೈಕಮಾಂಡ್ಗೆ ಬಿಟ್ಟಿದ್ದು ಈಗ ಸಿಎಂ ಬದಲಾವಣೆ ಮಾಡುತ್ತಾರೆ ಅಂತ ನನಗೇನು ಅನಿಸುತ್ತಿಲ್ಲ ಎಂದು ಜಿ ಪರಮೇಶ್ವರ್ ಹೇಳಿಕೆ ನೀಡಿದರು.








