ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದಲ್ಲಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಲಾಗಿದೆ.
ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಅಗಲಿದ ನಾಯಕ ಎಸ್.ಎಂ.ಕೃಷ್ಣ ಅವರಿಗೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡ ವಿಧಾನಸಭೆ ಕಲಾಪದಲ್ಲಿ ಎಸ್.ಎಂ.ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಎಸ್.ಎಂ.ಕೃಷ್ಣ ಸುಧೀರ್ಘ ರಾಜಕಾರಣ ಮಾಡಿದ್ದಾರೆ. ನಾನು ವಿದ್ಯಾರ್ಥಿಯಾಗಿದ್ದ ವೇಳೆ ಅವರ ಅಭಿಮಾನಿಯಾಗಿದ್ದೆ. ಅವರು ಮುತ್ಸದ್ಧಿ ರಾಜಕಾರಣಿಯಾಗಿದ್ದರು ಎಂದು ತಿಳಿಸಿದ್ದಾರೆ.
ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ತಮ್ಮಿಷ್ಟದ ಕಾಫಿ ಡೇ ಜಾಗದಲ್ಲೆ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.