ಬೆಂಗಳೂರು : ಸಂಗೀತ ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ.ಕರ್ನಾಟಕ ರಕ್ಷಣಾ ವೇದಿಕೆ ನೀಡಿದ ದೂರಿನ ಮೇರೆಗೆ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂಬುದಾಗಿ ತಿಳಿದು ಬಂದಿದೆ.
ಇನ್ನು ಈ ವಿಚಾರವಾಗಿ ಸೋನು ನಿಗಮ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಕನ್ನಡ ಹಾಡು ಅನ್ನೋದಕ್ಕೂ ಬೆದರಿಕೆ ಹಾಕುವುದಕ್ಕೂ ತುಂಬಾ ವ್ಯತ್ಯಾಸವಿದೆ. ಅವರು ನನಗೆ ಬೆದರಿಕೆ ಒಡ್ಡಿದ್ದರು. ಎಲ್ಲಾ ಕಡೆಯೂ ಇಂತಹ ನಾಲ್ಕರಿಂದ ಐದು ಕೆಟ್ಟ ಮಂದಿ ಇದ್ದೇ ಇರುತ್ತಾರೆ. ಅವರು ಬೆದರಿಕೆ ಒಡ್ಡುವ ರೀತಿಯಲ್ಲಿ ಹಾಡುವಂತೆ ಕೇಳಿದರು. ಕಾಶ್ಮೀರದಲ್ಲಿ ಉಗ್ರರು ಭಾಷೆ ಕೇಳಲಿಲ್ಲ ಜಾತಿ ಕೇಳಿ ಕೊಂದರು. ಹಾಗಾಗಿ ನಾನು ಪಹಲ್ಗಾಮ್ ಘಟನೆಯನ್ನು ಉದಾಹರಣೆಯಾಗಿ ಹೇಳಿದೆ ಅಷ್ಟೇ ಎಂದು ತಿಳಿಸಿದರು.
ಘಟನೆ ಹಿನ್ನೆಲೆ?
ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಏಪ್ರಿಲ್ 25-26ರಂದು ನಡೆದ ಸಂಗೀತ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಮತ್ತು ಭಾವನಾತ್ಮಕವಾಗಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದರು. ಯುವಕನೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದ್ದಕ್ಕೆ ‘ಕನ್ನಡ. ಕನ್ನಡ ಇದಕ್ಕೆ ಪಹಲ್ಗಾಮ್ನಲ್ಲಿ ದಾಳಿ ನಡೆಯಿತು ಎಂದಿದ್ದರು.
ಸೋನು ನಿಗಮ್ ಈ ಹೇಳಿಕೆಗೆ ಕನ್ನಡಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಕರವೇ ನಾರಯಣ ಗೌಡರಂತೂ ಸೋನು ನಿಗಮ್ರನ್ನು ಸಾಂಸ್ಕೃತಿಕ ಭಯೋತ್ಫಾದಕ ಎಂದು ಹೇಳಿದ್ದರು.ಇದೀಗ ಕರ್ನಾಟಕ ರಕ್ಷಣ ವೇದಿಕೆ ನೀಡಿದ ದೂರಿನ ಆಧಾರದ ಮೇಳೆ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸೋನು ನಿಗಮ್ ವಿರುದ್ದ ಎಫ್‌ಐಆರ್ ದಾಖಲಾಗಿದ್ದು. ಬಿಎನ್ಎಸ್ ಸೆಕ್ಷನ್ 352ರ ಅಡಿ ಪ್ರಚೋದನೆ ನೀಡಿದ ಪ್ರಕರಣ ದಾಖಲಾಗಿದೆ.