ಬೆಂಗಳೂರು : ಚನ್ನಪಟ್ಟಣದ ಉಪಚುನಾವಣೆಗೆ ಇದೀಗ ಮೈತ್ರಿ ಹಾಗೂ ಕಾಂಗ್ರೆಸ್ ಪಕ್ಷದಿಂದ ಭಾರಿ ಸ್ಪರ್ಧೆ ಏರ್ಪಟ್ಟಿದ್ದು, ಈ ಒಂದು ಉಪಚುನಾವಣೆಗೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ನಾನೇ ಅಭ್ಯರ್ಥಿ ಎಂದು ಘೋಷಿಸಿದರು.
ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ವೀರಭದ್ರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಡಿಕೆ ಶಿವಕುಮಾರ್, ಮುಂಬರುವ ಚನ್ನಪಟ್ಟಣದ ಉಪಚುನಾವಣೆಗೆ ನಾನೇ ಅಭ್ಯರ್ಥಿ ಎಂದು ಹೇಳುವ ಮೂಲಕ ಸ್ಪೋಟಕ ಹೇಳಿಕೆ ನೀಡಿದರು.
ಇನ್ನು ಬಿಜೆಪಿಯಿಂದ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಇಲ್ಲವಾದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ಸಿಪಿ ಯೋಗೇಶ್ವರ್ ಕೂಡ ಬಂಡಾಯ ಸ್ಪರ್ಧೆ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ಹಾಗಾಗಿ ಬಿಜೆಪಿಯಲ್ಲಿ ಸಹಜವಾಗಿ ಅಸಮಾಧಾನದ ಹೊಗೆ ಆಡುತ್ತಿರುವುದು ಕಂಡುಬರುತ್ತಿದೆ. ಇದರ ಒಂದು ಲಾಭ ಪಡೆಯಲು ಡಿಸಿಎಂ ಡಿಕೆ ಶಿವಕುಮಾರ್ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ.
ಇನ್ನು ಗ್ಯಾರಂಟಿ ಯೋಜನೆಗಳ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು, ಗ್ಯಾರಂಟಿಗಳಲ್ಲಿ ಯಾವುದೇ ರೀತಿಯಾಗಿ ಬದಲಾವಣೆ ಇಲ್ಲ. ಯಾವ ಸಚಿವರು ಏನು ಮಾತನಾಡುವುದಿಲ್ಲ. ಯಾವುದೇ ಬದಲಾವಣೆ ಗ್ಯಾರಂಟಿ ಯೋಜನೆಗಳಲ್ಲಿ ಇಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು.