ಹುಬ್ಬಳ್ಳಿ : ಸದ್ಯ ರಾಜ್ಯ ರಾಜಕಾರಣದಲ್ಲಿ ಒಂದು ಕಡೆ ಡಿನ್ನರ್ ಪಾಲಿಟಿಕ್ಸ್ ಜೋರಾಗಿದ್ದು, ಇದರ ಮಧ್ಯ ಅಧಿಕಾರ ಹಂಚಿಕೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಕೂಗು ಜೋರಾಗಿ ಕೇಳಿ ಬರುತ್ತಿದೆ.ಇದರ ಮಧ್ಯ, ಅಬಕಾರಿ ಇಲಾಖೆಯ ಸಚಿವ ಆರ್.ಬಿ ತಿಮ್ಮಾಪೂರ್ ಅವರು, ಇದೀಗ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಒಂದು ವೇಳೆ ಹೈಕಮಾಂಡ್ ಹೇಳಿದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಹೇಳಿದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ಅಬಕಾರಿ ಸಚಿವ ಆರ್.ಬಿ ತಿಮ್ಮಾಪೂರ್ ಹೇಳಿಕೆ ನೀಡಿದರು. ದಲಿತರು ಯಾಕೆ ಸಿಎಂ ಆಗಬಾರದು? ಮುಖ್ಯಮಂತ್ರಿ ಮಾಡಿದರೆ ಯಾರು ಬೇಡ ಅಂತ ಹೇಳುತ್ತಾರೆ ಎಂದರು.
ಸಿಎಂ ಆಗಲು ನನಗೆ ಅಷ್ಟು ಶಕ್ತಿ ಇದೆಯೋ ಇಲ್ಲವೋ, ಶಾಸಕಾಂಗ ಪಕ್ಷದ ಸಭೆಯಲ್ಲಿ ನನ್ನ ಒಪ್ಪುತ್ತಾರೋ ಇಲ್ಲವೋ ಅದೆಲ್ಲ ನಂತರದ ಮಾತು. ಆದರೆ ಹೈಕಮಾಂಡ್ ಹೇಳಿದರೆ ನಾನೇ ಸಿಎಂ ಆಗುತ್ತೇನೆ. ದಲಿತರು ಮುಖ್ಯಮಂತ್ರಿ ಆಗಬೇಕೆಂದರೆ ಅವರೇ ಸಿಎಂ ಆಗುತ್ತಾರೆ. ಆದರೆ ನಮ್ಮಲ್ಲಿ ಸದ್ಯಕ್ಕೆ ಅಂತಹದ್ದೇನು ಇಲ್ಲ ಅದು ಹುಬ್ಬಳ್ಳಿಯಲ್ಲಿ ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ್ ಹೇಳಿಕೆ ನೀಡಿದರು.