ಬೆಂಗಳೂರು : KPSC ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡೋಣ. ಮರು ಪರೀಕ್ಷೆ ಮಾಡಿ ಎಂದು ಸೂಚನೆ ಕೊಡಲು ಈಗ ಸಾಧ್ಯವಿಲ್ಲ, ಪ್ರಕರಣ ನ್ಯಾಯಾಲಯದಲ್ಲಿದೆ. ಮರು ಪರೀಕ್ಷೆಗೆ ನ್ಯಾಯಾಲಯ ಸೂಚನೆ ಕೊಟ್ಟರೆ ಮರು ಪರೀಕ್ಷೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
KPSC ಪರೀಕ್ಷೆಯಲ್ಲಿ ಭಾಷಾಂತರದಲ್ಲಿ ಆದ ಲೋಪದ ಕಾರಣಕ್ಕೆ ಅಭ್ಯರ್ಥಿಗಳಿಗೆ ಆಗಿರುವ ಸಮಸ್ಯೆ ಬಗ್ಗೆ ವಿರೋಧ ಪಕ್ಷದ ನಿಲುವಳಿ ಸೂಚನೆ ಮೇಲೆ ಕೆಪಿಎಸ್‌ಸಿ ಕುರಿತ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿ, KPSC ನಲ್ಲಿ ಹಲವು ಬಾರಿ ನಾನಾ ಗೊಂದಲಗಳಾಗಿ, ನ್ಯಾಯಾಲಯಗಳ ಮೆಟ್ಟಿಲು ಏರಿರುವ ಚರಿತ್ರೆ ಇದೆ. ಭ್ರಷ್ಟಾಚಾರ KPSC ಯಿಂದ ಹೊರಗೆ ಹೋಗಬೇಕು ಇದರ ಬಗ್ಗೆ ಎರಡು ಮಾತಿಲ್ಲ. ನಾನು ಯಾವತ್ತಿಗೂ ಅಧಿಕಾರಿಗಳನ್ನು ವಹಿಸಿಕೊಂಡು ಹಾಗೂ ಕೆಪಿಎಸ್ಸಿ ವಹಿಸಿಕೊಂಡು ಮಾತನಾಡಲ್ಲ. ಎಲ್ಲಿ ನ್ಯಾಯ ಸಿಗಬೇಕು ಅದರ ಪರವಾಗಿಯೇ ಇರುತ್ತೇನೆ.
ಯಾರು ತಪ್ಪು ಮಾಡಿದ್ದಾರೋ ಆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಅಧಿಕಾರಿಗಳ ವಿರುದ್ಧ ಅಕ್ರಮ ಆಗಬೇಕು ಎಂದು ಸೂಚನೆ ನೀಡಿದ್ದೇನೆ. ಕ್ರಮ ತೆಗೆದುಕೊಳ್ಳುವಂತೆ ಸೆಕ್ರೆಟರಿಗೆ ಹೇಳಿದ್ದೇನೆ. ನಾವೆಲ್ಲರೂ ಪ್ರಾಮಾಣಿಕರು ಅಂತಾನೆ ಹೇಳೋದು. ಆದರೆ ಎಷ್ಟು ಜನರು ಅಪ್ರಾಮಾಣಿಕರು ಇರುತ್ತಾರೋ ಮರು ಪರೀಕ್ಷೆ ಮಾಡಲು ಹಿಂದೇಟು ಹಾಕಲ್ಲ. ಎಲ್ಲರನ್ನೂ ಕರೆದು ಸಲಹೆ ಪಡೆದು ತೀರ್ಮಾನ ಮಾಡುತ್ತೇನೆ ಅದರಿಂದ ನೀವು ಹೇಳಿದ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಇದನ್ನು ಸರಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. 2 ಕೇಸ್ ಕೋರ್ಟ್ ನಲ್ಲಿ ಇರುವ ಕಾರಣ ಮರು ಪರೀಕ್ಷೆ ಅಸಾಧ್ಯ ಎಂದರು.