ಬೆಂಗಳೂರು : ಪೋಕ್ಸೋ ಪ್ರಕರಣ ಸಂಬಂಧ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿರುವ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬೆಂಗಳೂರಿಗೆ ಆಗಮಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಜೂನ್ ೧೭ ರಂದು ವಿಚಾರಣೆಗೆ ಹೋಗುತ್ತೇನೆ. ಯಾರ ಮೇಲೂ ಆರೋಪ ಮಾಡಲ್ಲ ಕಾಲವೇ ಉತ್ತರ ನೀಡಲಿದೆ ಎಂದು ತಿಳಿಸಿದ್ದಾರೆ.
ನಿಗದಿತ ಕಾರ್ಯಕ್ರಮಗಳು ಇರುವುದರಿಂದ ದೆಹಲಿಗೆ ಹೋಗಿದ್ದೆ. ಯಾರ ಮೇಲೂ ಆರೋಪ ಮಾಡುವುದಿಲ್ಲ, ವಿಚಾರಣೆಗೆ ಹಾಜರಾಗುತ್ತೇನೆ ಎಂದು ಕೋರ್ಟ್ ಗೆ ಮೊದಲೇ ಹೇಳಿದ್ದೆ ಎಂದರು.