ಮೈಸೂರು : ಸದ್ಯ ರಾಜ್ಯದಲ್ಲಿ ಹಲವು ಗಲಭೆ ಪ್ರಕರಣಗಳು ನಡೆದಿದ್ದು, ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಘಟನೆ, ಮೈಸೂರಿನಲ್ಲಿ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಹ್ವಾನಿಸಿದ್ದು ಸೇರಿದಂತೆ ಹಲವು ಘಟನೆಗಳು ವಿವಾದಕ್ಕೆ ಕಾರಣವಾಗಿದೆ. ಇದೀಗ ಬಿಜೆಪಿ ಉಚ್ಛಾಟಿತ ಶಾಸಕ ಬಸನ ಒಡ ಪಾಟಿಲಿ 2028ಕ್ಕೆ ನಾನೇ ಹೊಸ ಪಕ್ಷ ಕಟ್ಟಿ ರಾಜ್ಯದ ಸಿಎಂ ಆಗುತ್ತೇನೆ ಎಂದು ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಅವರು, 2028 ಕ್ಕೆ ನಾನೇ ರಾಜ್ಯದ ಮುಖ್ಯಮಂತ್ರಿ ಆಗುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಒಂದು ಹೇಳಿಕೆ ನೀಡಿದ್ದಾರೆ. ಬಿಜೆಪಿ ರಿಪೇರಿ ಆದರೆ ಬಿಜೆಪಿ ಜೊತೆಗೆ ಇಲ್ಲದಿದ್ದರೆ ಹೊಸ ಪಕ್ಷ ಕಟ್ಟುತ್ತೇನೆ. ಹೊಸ ಪಕ್ಷ ಕಟ್ಟಿ ಮುಖ್ಯಮಂತ್ರಿ ಆಗುತ್ತೇನೆ. ಬಿಜೆಪಿ ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ.ಪ್ರತಾಪ್ ಸಿಂಹ ರಮೇಶ್ ಜಾರಕಿಹೊಳಿ ಸೇರಿದಂತೆ ಒಂದು ತಂಡ ಮಾಡಿದ್ದೇವೆ.
ಭ್ರಷ್ಟಾಚಾರ ಮುಕ್ತ ಮತ್ತು ಕುಟುಂಬ ರಾಜಕಾರಣ ಮುಕ್ತ ಆಡಳಿತದ ಗುರಿ ಹೊಂದಲಾಗಿದ್ದು, ಪ್ರಾಮಾಣಿಕವಾಗಿ ರಾಜ್ಯದ ಜನರಿಗೆ ಉತ್ತಮ ಆಡಳಿತ ಕೊಡುತ್ತೇವೆ. ಹೊಂದಾಣಿಕೆ ರಾಜಕಾರಣ ಅಂತ್ಯವಾಗಲು ಎಂದು ಪ್ರಾರ್ಥನೆ ಮಾಡುತ್ತೇನೆ. ಬಿಜೆಪಿಯ ಕೆಲವರು ಕಾಂಗ್ರೆಸ್ ನಾಯಕರು ಜೊತೆ ಸೇರಿಕೊಂಡಿದ್ದಾರೆ. ಹೀಗಾಗಿ ರಾಜ್ಯ ಬಿಜೆಪಿಯನ್ನು ರಿಪೇರಿ ಮಾಡುವ ಅವಶ್ಯಕತೆ ಇದೆ ಎಂದು ಮೈಸೂರಿನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.