ಮಂಗಳೂರು : ಇಲ್ಲಿನ ಜಿರೋಸಾ ಶಾಲೆಯ ಶಿಕ್ಷಕಿಯೊಬ್ಬರು ಧರ್ಮನಿಂದನೆ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಈ ಪ್ರಕರಣದ ತನಿಖೆಗೆ ಐಎಎಸ್ ಅಧಿಕಾರಿಯೊಬ್ಬರನ್ನು ನೇಮಕ ಮಾಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಮಂಗಳೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿಯ ಜಿಲ್ಲಾ ಹೆಚ್ಚುವರಿ ಆಯುಕ್ತ, ಐಎಎಸ್‌ ಅಧಿಕಾರಿ ಆಕಾಶ್‌ ಶಂಕರ್‌ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ಈ ಸಂಬಂಧ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ಶೀಘ್ರ ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ ಎಂದರು.

ಶಿಕ್ಷಕಿಯ ವಿರುದ್ಧವೂ ಶಿಕ್ಷಣ ಇಲಾಖೆ ತನಿಖೆ ನಡೆಸುತ್ತದೆ. ಪೊಲೀಸರು ತನಿಖೆ ನಡೆಸುವುದಿಲ್ಲ, ಹಾಗಾಗಿ ಎಫ್‌ಐಆರ್‌ ದಾಖಲಿಸಿಲ್ಲ. ಯಾರು ತಪ್ಪು ಮಾಡಿದರೂ ತನಿಖೆಯಲ್ಲಿ ತಿಳಿದುಬರುತ್ತದೆ ಎಂದರು. ಈ ಘಟನೆಯಿಂದ ಜಿಲ್ಲೆಗೆ ಡ್ಯಾಮೇಜ್‌ ಆಗಿದೆ. ಮಕ್ಕಳನ್ನು ರಸ್ತೆಯಲ್ಲಿ ನಿಲ್ಲಿಸಿ ಸಮಾಜ ಒಡೆಯುವ ಕೆಲಸ ಮಾಡಿದ್ದಾರೆ.

ಶಾಸಕರ ನಡವಳಿಕೆಯಿಂದ ಬೇಸರವಾಗಿದೆ. ಘಟನೆ ಸಂಬಂಧ ದೂರು ಬಂದ ಹಿನ್ನೆಲೆಯಲ್ಲಿ ಶಾಸಕರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಬಿಜೆಪಿಯವರು ಹೇಳಿದಾಕ್ಷಣ ಪ್ರಕರಣ ಹಿಂಪಡೆಯಲಾಗದು. ತನಿಖೆ ನಡೆಯುತ್ತಿದ್ದು, ತಪ್ಪು ಎಸಗಿದ್ದು ದೃಢಪಟ್ಟರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಸಚಿವರು ಹೇಳಿದರು.

ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶಿಕ್ಷಕಿ ಪಾಠ ಮಾಡುವಾಗ ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಇಲ್ಲಿನ ಶಾಸಕರು, ಮಕ್ಕಳನ್ನು, ಶಿಕ್ಷಕರನ್ನು ಬೀದಿಯಲ್ಲಿ ನಿಲ್ಲಿಸಿ ಪ್ರತಿಭಟನೆ ಮಾಡಿದ್ದಾರೆ. ಇದು ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು. ಇಲ್ಲಿನ ಜನತೆ ತಲೆತಗ್ಗಿಸುವಂತೆ ಮಾಡಿದ್ದಾರೆ.

ನಿಮ್ಮ ‘ಅಂಗೈ’ನಲ್ಲಿ ಪದೇ ಪದೇ ‘ಬೆವರು’ ಬರ್ತಿದ್ಯಾ.? ಎಚ್ಚರ, ಇದು ಮಾರಣಾಂತಿಕ ಕಾಯಿಲೆ ಸಂಕೇತವಾಗಿರ್ಬೋದು

ಗಮನಿಸಿ: ಏ.11ರೊಳಗೆ ವನ್ಯಜೀವಿ, ಪ್ರಾಣಿಗಳ ಅಂಗಾಂಗಗಳ ಟ್ರೋಫಿಗಳಿದ್ದಲ್ಲಿ ಹಿಂತಿರುಗಿಸಿ

BIG NEWS: ಬೆಂಗಳೂರಲ್ಲಿ ‘ಕನ್ನಡ ನಾಮಫಲಕ’ ಅಳವಡಿಸದ ’18 ಅಂಗಡಿ’ಗಳಿಗೆ ‘BBMP ಬೀಗ’

Share.
Exit mobile version