ನವದೆಹಲಿ: ಐಸಿಸಿ ಟಿ20 ವಿಶ್ವಕಪ್ 2024ರ ವೇಳಾಪಟ್ಟಿ ಪ್ರಕಟಗೊಂಡಿದ್ದು, ಜೂನ್ 9ರಂದು ನ್ಯೂಯಾರ್ಕ್ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೆಣಸಲಿದೆ. ‘ಎ’ ಗುಂಪಿನಲ್ಲಿ ಭಾರತ ಪಾಕಿಸ್ತಾನ, ಅಮೆರಿಕ, ಕೆನಡಾ ಮತ್ತು ಐರ್ಲೆಂಡ್ ವಿರುದ್ಧ ಸೆಣಸಲಿದೆ. ಉದ್ಘಾಟನಾ ಪಂದ್ಯದಲ್ಲಿ ಯುಎಸ್ಎ ಕೆನಡಾವನ್ನು ಎದುರಿಸಲಿದೆ. ಭಾರತ ‘ಎ’ ಗುಂಪಿನಲ್ಲಿದ್ದು, ಪಾಕಿಸ್ತಾನ, ಅಮೆರಿಕ, ಕೆನಡಾ, ಐರ್ಲೆಂಡ್ ತಂಡಗಳೊಂದಿಗೆ ಸ್ಥಾನ ಪಡೆದಿದೆ.
2024ರ ಟಿ20 ವಿಶ್ವಕಪ್ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಅಧಿಕೃತವಾಗಿ ಪ್ರಕಟಿಸಿದೆ. ಕ್ಯಾಲೆಂಡರ್ ವರ್ಷದ ಮಾರ್ಕ್ಯೂ ಐಸಿಸಿ ಈವೆಂಟ್ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ (ಯುಎಸ್ಎ) ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯಲಿದ್ದು, ಜೂನ್ 1 ರಂದು ಯುಎಸ್ಎ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ ಕೆನಡಾವನ್ನು ಎದುರಿಸಲಿದೆ. ಫೈನಲ್ ಪಂದ್ಯ ಜೂನ್ 29ರಂದು ನಡೆಯಲಿದೆ. ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ 20 ವಿಶ್ವಕಪ್ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್ನಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ.
2024ರ ಟಿ20 ವಿಶ್ವಕಪ್ ವೇಳಾಪಟ್ಟಿ ಹೀಗಿದೆ:
ಜೂನ್ 5: ಭಾರತ-ಐರ್ಲೆಂಡ್
ಜೂನ್ 9: ಭಾರತ-ಪಾಕಿಸ್ತಾನ
ಜೂನ್ 12ರಂದು ಭಾರತ-ಅಮೆರಿಕ ಮುಖಾಮುಖಿ
ಜೂನ್ 15: ಭಾರತ-ಕೆನಡಾ