ಬೆಂಗಳೂರು : ರೈತ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೇ ಮಹಿಳೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದೂರು ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ಶಾಸಕ ವಿನಯ್ ಕುಲಕರ್ಣಿ ಅವರು ಸಂತ್ರಸ್ತೇ ಮಹಿಳೆಯ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ.
ಹೌದು ಸಂತ್ರಸ್ತೆ ಮಹಿಳೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ವಿಚಾರವಾಗಿ ಇಂದು ವಿನಯ್ ಕುಲಕರ್ಣಿ ಅವರು, ತನ್ನ ವಿಡಿಯೋ ಹಾಗೂ ಮೊಬೈಲ್ ಸಂಭಾಷಣೆ ಪ್ರಸಾರ ಮಾಡಲು ಷಡ್ಯಂತರ ರೂಪಿಸಿದ್ದಾರೆ ಎಂದು ಶಾಸಕ ವಿನಯ್ ಕುಲಕರ್ಣಿ ಅವರು ಪ್ರತಿದೂರು ನೀಡಿದ್ದಾರೆ. ದೂರು ಆಧರಿಸಿ ಖಾಸಗಿ ಸುದ್ದಿ ವಾಹಿನಿ ಮತ್ತು ಸಂತ್ರಸ್ತೆ ವಿರುದ್ಧ ಸಂಜಯ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಂತ್ರಸ್ತೆ ಅನೇಕ ಅಧಿಕಾರಿಗಳು ಹಾಗೂ ರಾಜಕೀಯ ನಾಯಕರಿಗೆ ಬ್ಲಾಕ್ ಮೇಲ್ ಮಾಡಿದ್ದಾಳೆ. ಸಂತ್ರಸ್ತೆ ಮೂಲಕ ನನ್ನ ವಿರುದ್ಧ ಸಂಚು ರೂಪಿಸಿ ಮಾನಹಾನಿ ಮಾಡಲಾಗಿದೆ ಎಂದು ಶಾಸಕ ವಿನಯ ಕುಲಕರ್ಣಿ ದೂರಿನಲ್ಲಿ ದಾಖಲಿಸಿದ್ದಾರೆ. ನಾನು ಅವಳನ್ನು ಮುಟ್ಟಿದ್ದರೇ ನನ್ನ ತಾಯಿಯನ್ನು ಮುಟ್ಟಿದ ಹಾಗೆ.ನಿಮಗೆ ಇಷ್ಟೇ ಹೇಳುತ್ತೇನೆ. ವಿಡಿಯೋ ಕಾಲ್ ಮಾಡಿದ್ದರು. ಆ ವಿಡಿಯೋ ಕಾಲ್ ಇಟ್ಟುಕೊಂಡು ಇಷ್ಟೊಂದು ಆರೋಪ ಮಾಡಿದ್ದಾರೆ. ಇದು ಸತ್ಯಕ್ಕೆ ದೂರವಾಗಿದೆ ಎಂದರು.