ಬೆಂಗಳೂರು : ತುಳುವಿನಿಂದ ಕನ್ನಡ ಹುಟ್ಟಿದ್ದು ಎಂದು ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದು ಅಲ್ಲದೆ, ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಉದ್ಘಟತನ ತೋರಿದ್ದಾರೆ. ಈ ವಿಚಾರವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿಗೆ ಅವರು, ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಕಮಲ್ ಹಾಸನ್ ಅವರ ಚಲನಚಿತ್ರ ಬಿಡುಗಡೆಗೆ ಅವಕಾಶ ಕೊಡಲ್ಲ. ಕಮಲ್ ಹಾಸನ ಕ್ಷಮೆ ಕೇಳದಿದ್ದರೆ ಸಿನಿಮಾ ಬ್ಯಾನ್ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಕಮಲ್ ಹಾಸನ್ ಕ್ಷಮೆ ಕೇಳಲ್ಲ ಅಂದರೆ ಬಿಡುವುದು ಯಾರು? ನಟ ಕಮಲ್ ಹಾಸನ್ ಅವರಿಂದ ಚಿತ್ರ ಮಾಡಿದವರಿಗೆ ಅನ್ಯಾಯ ಆಗಲ್ವೇ? ಇದನ್ನು ನಾವು ಸುಮ್ಮನೆ ಬಿಡುವುದಿಲ್ಲ. ಇವತ್ತು ಕೊನೆಯ ದಿನ ನೋಡೋಣ. ಆದರೆ ನಾವು ಯಾವುದೇ ಕಾರಣಕ್ಕೂ ಸುಮ್ಮನೆ ಇರಲ್ಲ ಎಂದು ಕಿಡಿ ಕಾರಿದರು.
ಕಮಲ್ ಹಾಸನ ಕ್ಷಮೆ ಕೇಳದಿದ್ದರೆ ಸಿನಿಮಾ ಬ್ಯಾನ್ ಮಾಡುತ್ತೇವೆ. ಕಮಲ್ ಹಾಸನ್ ಬಗ್ಗೆ ಫಿಲಂ ಚೇಂಬರ್ ಜೊತೆಗೆ ಮಾತನಾಡಿದ್ದೇನೆ. ನಮ್ಮ ಭಾಷೆಯ ವಿಚಾರವಾಗಿ ಯಾರೇ ಮಾತನಾಡಿದರು ಬಿಡುವುದಿಲ್ಲ. ಈ ಬಗ್ಗೆ ವಿಶೇಷ ಕಾನೂನು ತರುವ ಬಗ್ಗೆ ಸಿಎಂ ಜೊತೆಗೆ ಮಾತನಾಡುತ್ತೇನೆ. ನಟ ಶಿವರಾಜ್ ಕುಮಾರ್ ಜೊತೆಗೂ ಮಾತನಾಡಿದ್ದೇನೆ. ಅವರೊಬ್ಬ ಕನ್ನಡದ ಹಿರಿಯ ನಟ ಈ ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ನಮ್ಮತನವನ್ನು ಶಿವರಾಜ್ ಕುಮಾರ್ ಉಳಿಸಿಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ನೀಡಿದರು