ಬೆಂಗಳೂರು : ಬೆಂಗಳೂರಿನಲ್ಲಿ CET ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಇದುವರೆಗೆ ನನಗಾಗಲಿ ಕೆಇಎ ಅಧಿಕಾರಿಗಳ ಗಮನಕ್ಕೆ ಈ ವಿಚಾರ ಗಮನಕ್ಕೆ ಬಂದಿಲ್ಲ. ಒಂದು ವೇಳೆ ಆ ರೀತಿಯಾಗಿದ್ದಾರೆ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ಡ್ರೆಸ್ ಕೋಡ್ ನಿಯಮವಿದೆ ಡ್ರೆಸ್ ಕೋಡ್ ನಿಯಮದ ಕುರಿತು ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಆದರೆ ಇಂದು ನಡೆದ ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಆ ರೀತಿ ಆಗಿದ್ದರೆ ಯಾರು ಜನಿವಾರ ತಿಳಿಸಿದ್ದಾರೋ ಆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ತಿಳಿಸಿದರು.








