ಬೆಂಗಳೂರು : ರಾಜ್ಯದಲ್ಲಿ ಇಡೀ ಪೊಲೀಸ್ ಇಲಾಖೆಯ ತಲಿತಗ್ಗಿಸುವಂತಹ ಘಟನೆ ನಡೆದಿದ್ದು, ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ, ರಾಜ್ಯ ಸರ್ಕಾರ ಇದೀಗ ರಾಮಚಂದ್ರರಾವ್ ಅವರನ್ನು ಸಸ್ಪೆಂಡ್ ಮಾಡಿದೆ.ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್, ಪ್ರಕರಣದ ಕುರಿತು ತನಿಖೆ ನಡೆಸಿ ವರದಿ ಬಂದ ಬಳಿಕ ಆರೋಪ ಸಾಬೀತಾದರೆ ಅವರನ್ನು ವಜಾ ಮಾಡಲಾಗುತ್ತೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಕೇಸ್ ಸಂಬಂಧಪಟ್ಟಂತೆ ಅವರನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಪ್ರಕರಣದ ವಿಚಾರ ತಿಳಿದು ಬೇಸರ ಆಗಿದೆ. ಪ್ರಕರಣದ ಸಂಬಂಧ ಪೂರ್ಣ ಪ್ರಮಾಣದ ತನಿಖೆ ನಡೆಸಲಾಗುತ್ತದೆ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಆರೋಪ ಸಾಬೀತಾದರೆ ವಜಾ ಕೂಡ ಆಗಬಹುದು ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು








