ಬೆಂಗಳೂರು : ನಿನ್ನೆ ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿ ಬಜೆಟ್ ಮಂಡನೆ ಮಾಡಿದರು.ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡನೆ ಮಾಡುತ್ತೇನೆ. ಅವರು ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ಎಲ್ಲದೂ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಲ್ಲಿ ಮಾತನಾಡಿದ ಅವರು, ಯಾರೊ ಏನೋ ಹೇಳುತ್ತಾರೆ ಎಂಬುದು ನನಗೆ ಮುಖ್ಯ ಅಲ್ಲ. ನನಗೆ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಹೈಕಮಾಂಡ್ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸ ಇದೆ. ಮೈಸೂರಿನ ಜನ ಮಾತ್ರ ಅಲ್ಲ, ಇಡೀ ನಾಡಿನ ಜನ ನಾನು ಇರಬೇಕೆಂದು ಬಯಸಿದ್ದಾರೆ. ಈ ಬಗ್ಗೆ ಅಂತಿಮ ತೀರ್ಮಾನ ಮಾಡುವುದು ಹೈಕಮಾಂಡ್.
ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧ. ಬಜೆಟ್‌ನ ದಾಖಲೆಗಳ ಮೇಲೆ ನಂಬಿಕೆ ಇಲ್ಲ. ಆದರೆ ಇನ್ನರೆಡು ಬಜೆಟ್ ಮಂಡಿಸುವ ಅವಕಾಶ ಸಿಕ್ಕರೆ ಮಂಡಿಸುತ್ತೇನೆ. ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ಈ ವಿಚಾರದಲ್ಲಿ ಏನೇ ಹಿಂದೆ ಮುಂದೆ ಪ್ರಶ್ನೆ ಕೇಳಿದರು ನನ್ನ ಉತ್ತರ ಹೈಕಮಾಂಡ್. ಜನ ಅವಕಾಶ ಕೊಟ್ಟರೆ ಮಂಡಿಸುತ್ತೇನೆ ಎಂದಿದ್ದಾರೆ.








