ಬೆಂಗಳೂರು : ಸದ್ಯ ಸಿಎಂ ಸಿದ್ದರಾಮಯ್ಯ ಸೇರಿದಂತೆ ವಿಪಕ್ಷ ನಾಯಕರು ಎಲ್ಲರೂ ಬೆಳಗಾವಿಯಲ್ಲಿ ಇದ್ದು ಇಂದಿನಿಂದ ಡಿಸೆಂಬರ್ 19 ರವರೆಗೆ ಬೆಳಗಾವಿ ಅಧಿವೇಶನ ನಡೆಯಲಿದೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಸುಪ್ರೀಂಕೋರ್ಟ್ನಿಂದ ನೋಟಿಸ್ ಜಾರಿಯಾಗಿದೆ.
ಹೌದು ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ ಪ್ರಶ್ನಿಸಿ ಶಂಕರ್ ಎನ್ನುವವರು ಅರ್ಜಿ ಸಲ್ಲಿಸಿದ್ದರು. ಈ ಮೊದಲು ಕರ್ನಾಟಕ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಬಳಿಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೆ ಶಂಕರ್ ಎನ್ನುವವರು ಸುಪ್ರೀಂ ಕೋರ್ಟಿಗೆ ಮೇಲ್ಮನೆ ಸಲ್ಲಿಸಿದ್ದರು.
ಇಂದು ನ್ಯಾಯಮೂರ್ತಿ ವಿಕ್ರಮನಾಥ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು ವಿಚಾರಣೆ ಬಳಿಕ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದ್ದಾರೆ. ಚುನಾವಣಾ ಅಕ್ರಮ ನಡೆಸಿದರೆ ಎಂದು ಶಂಕರ್ ಆರೋಪಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ ಬಂದಿದ್ದು ಹಾಗಾಗಿ ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.








