ಬೆಂಗಳೂರು : ಸ್ಮಾರ್ಟ್ ಮೀಟರ್ ಗುತ್ತಿಗೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಕೆಜೆ ಜಾರ್ಜ್ ಗೆ ಹೈಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.ಸಚಿವ ಕೆಜೆ ಜಾರ್ಜ್ ವಿರುದ್ಧದ ಖಾಸಗಿ ದೂರಿನ ವಿಚಾರಣೆಗೆ ಇದೀಗ ಹೈಕೋರ್ಟ್ ತಡೆ ನಡೆ ಆದೇಶ ಹೊರಡಿಸಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಕ್ಕೆ ಈಗ ಹೈಕೋರ್ಟ್ ತಡೆ ನೀಡಿದೆ. ಸಚಿವ ಕೆಜೆ ಜಾರ್ಜ್ ಕೇಸ್ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದರು. ಕೋರ್ಟ್ ಲೋಕಾಯುಕ್ತ ಪೊಲೀಸರಿಂದ ವರದಿ ಕೇಳಿದೆ 17A ಅಡಿ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೆ ಆದೇಶ ಹೊರಡಿಸಿದ್ದು, ಬಿಎನ್ಎಸ್ ನಿಯಮ ಉಲ್ಲಂಘನೆ ಎಂದು ಹಿರಿಯ ವಕೀಲ ಸಿ ವಿ ನಾಗೇಶ್ ಅವರು ವಾದಿಸಿದರು. ಮಧ್ಯಂತರ ರಿಲೀಫ್ ನೀಡಿ ನೀಡಿ ನಾ. MI ಅರುಣ್ ಆದೇಶ ಹೊರಡಿಸಿದ್ದಾರೆ.