ಬೆಂಗಳೂರು : ಬೇಲೆಕೇರಿ ಬಂದರಿನಿಂದ ಸುಮಾರು 44 ಕೋಟಿ ರು. ಮೌಲ್ಯದ ಕಬ್ಬಿಣದ ಅದಿರು ಅಕ್ರಮ ರಫ್ತು ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ, ಆರೋಪಿ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಮತ್ತು ಅವರ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯವು(ಇ.ಡಿ.) ನಗರದ ಪಿಎಂಎಲ್‌ಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದೆ.
ಉತ್ತರ ಕನ್ನಡ ಜಿಲ್ಲೆ ಕಾರವಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಮತ್ತು ಅವರೇ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈವೇಟ್ ಲಿಮಿಡೆಟ್ ಕಂಪನಿಯನ್ನು ಆರೋಪಿ ಎಂದು ಪರಿಗಣಿಸಲಾಗಿದೆ. ಈ ಪ್ರಕರಣ ಸಂಬಂಧ ಕಳೆದ ಸೆಪ್ಟೆಂಬರ್‌ನಲ್ಲಿ ಇ.ಡಿ.ಅಧಿಕಾರಿಗಳು ಸತೀಶ್ ಕೃಷ್ಣ ಸೇಲ್ ಅವರನ್ನು ಬಂಧಿಸಿದ್ದರು.
ಕಬ್ಬಿಣದ ಅದಿರು ಅಕ್ರಮ ರಫ್ತು ಸಂಬಂಧ 2010ರಲ್ಲಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಮೇರೆಗೆ ಇ.ಡಿ. ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ಬಳ್ಳಾರಿಯಿಂದ ಬೇಲೆಕೇರಿ ಬಂದರಿಗೆ ಸುಮಾರು 8 ಲಕ್ಷ ಟನ್ ಕಬ್ಬಿಣದ ಅದಿರು ಅಕ್ರಮವಾಗಿ ಸಾಗಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ED, Bengaluru Zonal office has filed Prosecution Complaint (PC) under the PMLA, 2002 before the Hon’ble Special Court (PMLA), Bengaluru against M/s. Shree Mallikarjun Shipping Pvt. Ltd. and its, Managing Director Satish Krishna Sail, Karwar MLA in connection with export of seized… pic.twitter.com/640tK2gMj4
— ED (@dir_ed) November 15, 2025








