ಬೆಂಗಳೂರು : ಬೆಂಗಳೂರಿನ ಶ್ರೀನಿವಾಸಪುರದ ಬಳಿ ಇರುವ ಕೋಗಿಲು ಬಡಾವಣೆಯಲ್ಲಿ ಅಕ್ರಮ ವಸತಿಗಳ ತೆರವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುನರ್ವಸತಿ ಪರಿಹಾರ ಕೋರಿ ಹೈಕೋರ್ಟಿಗೆ ಜೈಬಾ ತಬಸುಮ್ ಮತ್ತಿತರರು ಪಿಐಎಲ್ ಸಲ್ಲಿಸಿದ್ದು ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ವಿಚಾರಣೆಯ ವೇಳೆ 28 ವರ್ಷಗಳಿಂದ ಇಲ್ಲಿ 3 ಸಾವಿರ ಜನರು ವಾಸಿಸುತ್ತಿದ್ದರು ಎಂದು ವಾದ ಮಡಿಸಲಾಯಿತು.
ಈ ವೇಳೆ ಎಜಿ ಶಶಿಕಿರಣಶೆಟ್ಟಿ ಅವರು 28 ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದಾರೆ ಎಂಬುವುದು ಸುಳ್ಳು ಹೇಳಿಕೆ. ಪ್ರತಿ ಅಕ್ರಮ ಮನೆಯ ಬಗ್ಗೆ ಉಪಗ್ರಹ ಫೋಟೋ ಹಾಜರುಪಡಿಸಲಾಗುತ್ತದೆ. ಸುಪ್ರೀಂಕೋರ್ಟ್ ತೀರ್ಪು ಈ ಪ್ರಕರಣಕ್ಕೆ ಅನ್ವಯ ಆಗುವುದಿಲ್ಲ ನಿರ್ವಸತಿಕರಾದವರಿಗೆ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಸರ್ಕಾರದಿಂದ ಊಟ ವೈದ್ಯಕೀಯ ವ್ಯವಸ್ಥೆ ಕಲ್ಪಿಸಲಾಗಿದೆ ಅಕ್ಷೇಪಣೆ ಸಲ್ಲಿಸಲು ಒಂದು ವಾರ ರಾಜ್ಯ ಸರ್ಕಾರ ಕಾಲಾವಕಾಶ ಕೋರಿತು. ಈ ವೇಳೆ ಹೈಕೋರ್ಟ್ ವಿಚಾರಣೆಯನ್ನು ಜನವರಿ 22ಕ್ಕೆ ನಿಗದಿಪಡಿಸಿತು.








