ಬೆಂಗಳೂರು : ಶಾಸಕ ವೀರೇಂದ್ರ ಪಪ್ಪಿ ವಿರುದ್ಧ ಅಕ್ರಮ ಆನ್ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸೆಪ್ಟೆಂಬರ್ 22 ರವರೆಗೆ ಶಾಸಕ ವೀರೇಂದ್ರ ಪಪ್ಪಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ.
ಇಂದು ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಾಜರುಪಡಿಸಿದ್ದರು. ಈ ವೇಳೆ ರಿಮೈಂಡ್ ಅರ್ಜಿಯಲ್ಲಿ ಇಡಿ ಅಧಿಕಾರಿಗಳು ಕಸ್ಟಡಿಗೆ ಕೇಳಿಲ್ಲ. ಹಾಗಾಗಿ ಇದೀಗ ಶಾಸಕ ವೀರೇಂದ್ರ ಪಪ್ಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.a