ಚಿತ್ರದುರ್ಗ : ಅಕ್ರಮ ಆನ್ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಅರೆಸ್ಟ್ ಮಾಡಲಾಗಿದೆ. ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಚಳ್ಳಕೆರೆಯಲ್ಲಿ ಇಡಿ ಅಧಿಕಾರಿಗಳು ಇಂದು ಮತ್ತೆ ದಾಳಿ ನಡೆಸಿದ್ದಾರೆ.
ವೀರೇಂದ್ರ ಪಪ್ಪಿ ನಿವಾಸದ ಮೇಲೆ ಮತ್ತೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ವೀರಶೈವ ಸಹಕಾರಿ ಬ್ಯಾಂಕ್, ಮಹೇಂದ್ರ ಕೋಟಕ್ ಬ್ಯಾಂಕ್ ನಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಶಾಸಕ ವೀರೇಂದ್ರ ಪಪ್ಪಿ ಅವರಿಂದ ಸಿಕ್ಕ ಮಾಹಿತಿಯನ್ನು ಆಧರಿಸಿ ಇಂದು ಇಡಿ ಅಧಿಕಾರಿಗಳು ಮತ್ತೆ ದಾಳಿ ಮಾಡಿದ್ದಾರೆ.