ಬೆಂಗಳೂರು : ಅಕ್ರಮವಾಗಿ ಆನ್ಲೈನ್ ಅಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಶಾಸಕ ವೀರೇಂದ್ರ ಪಪ್ಪಿಗೆ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇಡಿ ಪ್ರಕರಣದಲ್ಲಿ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು ಆಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ.
ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ವೀರೇಂದ್ರ ಪಪ್ಪಿ ಜೈಲು ಸೇರಿದ್ದರು. ಕಳೆದ ನಾಲ್ಕು ತಿಂಗಳಿಂದ ಪರಪ್ಪನ ಅಗ್ರಹಾರ ಇದೀಗ ಇಡೀ ಪ್ರಕರಣದಲ್ಲಿ ವೀರೇಂದ್ರ ಪಪ್ಪಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪ್ರಕರಣ ಹಿನ್ನೆಲೆ?
ಅಕ್ರಮ ಆನ್ಲೈನ್ ಮತ್ತು ಬೆಟ್ಟಿಂಗ್ನಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕರ್ನಾಟಕದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ. ಸಿ. ವೀರೇಂದ್ರ ಪಪ್ಪಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗ್ಯಾಂಗ್ಟಾಕ್‌ನಲ್ಲಿ ಬಂಧಿಸಿತ್ತು. ಇದೇ ವೇಳೆ ದಾಳಿಯ ವೇಳೆ ಭಾರೀ ಪ್ರಮಾಣದ ನಗದು ಹಾಗೂ ಚಿನ್ನಾಭರಣಗಳು ಪತ್ತೆಯಾಗಿತ್ತು.
ವಿರೇಂದ್ರ ಪಪ್ಪಿ ತನ್ನ ಸಹಚರರೊಂದಿಗೆ ಸಿಕ್ಕಿಂನ ಗ್ಯಾಂಗ್ಟಾಕ್‌ಗೆ ಪ್ರಯಾಣಿಸಿದ್ದರು. ಅಲ್ಲಿ ಅವರು ಕ್ಯಾಸಿನೊಗಾಗಿ ಒಂದು ತುಂಡು ಭೂಮಿಯನ್ನು ಗುತ್ತಿಗೆಗೆ ಪಡೆಯುತ್ತಿದ್ದರು ಎಂದು ಆರೋಪಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಸಂಸ್ಥೆಯು ವಿರೇಂದ್ರ ಪಪ್ಪಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ 30 ಕಟ್ಟಡಗಳ ಮೇಲೆ ದಾಳಿ ನಡೆಸಿದ ಒಂದು ದಿನದ ನಂತರ, ಸುಮಾರು ಒಂದು ಕೋಟಿ ವಿದೇಶಿ ಕರೆನ್ಸಿ, ಸುಮಾರು 6 ಕೋಟಿ ಮೌಲ್ಯದ ಚಿನ್ನದ ಆಭರಣಗಳು ಮತ್ತು ಸುಮಾರು 10 ಕೆಜಿ ತೂಕದ ಬೆಳ್ಳಿ ವಸ್ತುಗಳು ಮತ್ತು ನಾಲ್ಕು ವಾಹನಗಳು ಸೇರಿದಂತೆ 12 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು.
ಕೇಂದ್ರ ತನಿಖಾ ಏಜೆನ್ಸಿಯು 17 ಬ್ಯಾಂಕ್ ಖಾತೆಗಳು ಮತ್ತು ಎರಡು ಬ್ಯಾಂಕ್ ಲಾಕರ್ಗಳನ್ನು ಸಹ ಸ್ಥಗಿತಗೊಳಿಸಿದೆ. ವೀರೇಂದ್ರ ಪಪ್ಪಿ ಅವರ ಸಹೋದರ ಕೆ. ಸಿ. ನಾಗರಾಜ್ ಮತ್ತು ಅವರ ಮಗ ಪೃಥ್ವಿ ಎನ್ ರಾಜ್ ಅವರ ಮನೆಗಳಿಂದ ಆಸ್ತಿಗೆ ಸಂಬಂಧಿಸಿದ ಅನೇಕ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇತರ ಸಹಚರರಾದ ಸಹೋದರ ಕೆ. ಸಿ. ತಿಪ್ಪೇಸ್ವಾಮಿ ಮತ್ತು ಪೃಥ್ವಿ ಎನ್. ರಾಜ್ ಅವರು ದುಬೈಯಿಂದ ಆನ್ಲೈನ್ ಗೇಮಿಂಗ್ ಕಾರ್ಯಾಚರಣೆಗಳನ್ನು ನಿರ್ವಹಿಸುತ್ತಿದ್ದರು ಎಂದು ಆರೋಪಿಸಲಾಗಿದೆ.








