ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಗುಂಡಿನ ಸದ್ದು ಕೇಳಿಬಂದಿದ್ದು, ಪತ್ನಿ ಜೊತೆಗೆ ಅಕ್ರಮ ಸಬಂಧ ಹೊಂದಿದ್ದ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಪತಿಯೊಬ್ಬ ಯುವಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಶಂಭೂವಿನಹಳ್ಳಿಯಲ್ಲಿ ಘಟನೆ ನಡೆದಿದ್ದು, ಶಿವರಾಜು ಎಂಬಾತ ಮಂಜು ಎಂಬ ಯುವಕನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ್ದಾನೆ. ಮುಂಬೈನ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಶಿವರಾಜು ವಾರದ ಹಿಂದೆ ಗ್ರಾಮಕ್ಕೆ ಬಂದಿದ್ದ. ಈ ವೇಳೆ ಪತ್ನಿ ಜೊತೆಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಂಜು ಎಂಬಾತನ ಮೇಲೆ ಶಿವರಾಜು ಫೈರಿಂಗ್ ಮಾಡಿದ್ದಾನೆ.
ಸದ್ಯ ಗಾಯಾಳು ಮಂಜುಗೆ ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಾಂಡವಪುರ ಪೊಲೀಸರು ಆರೋಪಿ ಶಿವರಾಜ್ ನನ್ನು ಬಂಧಿಸಿದ್ದಾರೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.