ಬೆಂಗಳೂರು: ಜನವರಿ 2 ರಂದುರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ ಮಾಡಿದ್ದು, ಈ ವೇಳೆ ಹಲವು ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳುವುದರ ಬಗ್ಗೆ ತೀರ್ಮಾನ ಮಾಡಲಾಗುವುದು ಎನ್ನಲಾಗಿದೆ.
ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿನಾಂಕ: 02.01.2025, ಗುರುವಾರ ಬೆಳಿಗ್ಗೆ 11:00 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 1ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಅಂತ ಸೂಚನ ಪತ್ರದಲ್ಲಿ ತಿಳಿಸಿದ್ದಾರೆ.