ನವದೆಹಲಿ: ಪ್ರಧಾನಿ ಮೋದಿ ನಿವಾಸದಲ್ಲಿ ಪ್ರಮುಖ CCS ಸಭೆ ಆರಂಭವಾಗಿದ್ದು, ಸಭೆಯಲ್ಲಿ ಪ್ರಮುಖವಾದ ತೀರ್ಮಾನವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೇ ಎನ್ನಲಾಗಿದೆ.
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾಕ್ಕೆ ತಮ್ಮ ಎರಡು ದಿನಗಳ ಭೇಟಿಯನ್ನು ಮೊಟಕುಗೊಳಿಸಿ ನವದೆಹಲಿಗೆ ಮರಳಿದರು ಮತ್ತು ಎನ್ಎಸ್ಎ ಅಜಿತ್ ದೋವಲ್, ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಅವರೊಂದಿಗೆ ತುರ್ತು ಸಭೆ ನಡೆಸಿದರು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಮಂಗಳವಾರ ಪ್ರವಾಸಿಗರ ಗುಂಪಿನ ಮೇಲೆ ಲಷ್ಕರ್-ಸಂಬಂಧಿತ ಭಯೋತ್ಪಾದಕರು ಗುಂಡು ಹಾರಿಸಿದ್ದು, ವಿದೇಶಿ ಪ್ರವಾಸಿಗರು ಸೇರಿದಂತೆ ಕನಿಷ್ಠ 26 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಲಷ್ಕರ್ ಅಂಗಸಂಸ್ಥೆಯಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ಈ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡಿದೆ.