ನವದೆಹಲಿ : ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದ್ದು, ದೇಶಾದ್ಯಂತ 357 ಆನ್ ಲೈನ್ ಗೇಮಿಂಗ್ ಅಪ್ಲಿಕೇಷನ್ ಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಹೌದು, ಬೆಟ್ಟಿಂಗ್ ಆ್ಯಪ್‌ಗಳ ಮೇಲೆ ಪೊಲೀಸರು ಕಠಿಣ ಕ್ರಮ ಕೈಗೊಂಡಿರುವ ಬೆನ್ನಲ್ಲೇ ಕೇಂದ್ರವು ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇದು ಸುಮಾರು 357 ಆನ್‌ಲೈನ್ ಗೇಮಿಂಗ್ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದೆ.
ಜಿಎಸ್‌ಟಿ ಗುಪ್ತಚರ ಇಲಾಖೆ 2400 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ದೇಶಾದ್ಯಂತ 700 ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ಗಳಿವೆ ಎಂದು ಗುರುತಿಸಲಾಗಿದೆ. ಕೆಲವು ಜನರು ಬೆಟ್ಟಿಂಗ್ ಅಪ್ಲಿಕೇಶನ್‌ಗಳ ಮೂಲಕ ಗಳಿಸಿದ ಹಣವನ್ನು ಹವಾಲಾ ಮೂಲಕ ಇತರ ದೇಶಗಳಿಗೆ ವರ್ಗಾಯಿಸುತ್ತಿರುವುದರಿಂದ ಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅದು ಹೇಳಿದೆ.