ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದ್ದು, ಕರ್ನಾಟಕದ ಗಡಿ ಹಾಗೂ ನದಿಗಳ ವಿವಾದಗಳ ಬಗ್ಗೆ ನಿಗಾವಹಿಸಲು ಸಚಿವರೊಬ್ಬರನ್ನು ನೇಮಿಸಿ ಆದೇಶ ಹೊರಡಿಸಿದೆ.
ಕರ್ನಾಟಕದ ಗಡಿ ಹಾಗೂ ನದಿಗಳಿಗೆ ಸಂಬಂಧಿಸಿದ ವಿವಾದಗಳ ಬಗ್ಗೆ ನಿರಂತರ ನಿಗಾವಹಿಸಿ, ಕಾನೂನಾತ್ಮಕವಾಗಿ ಮತ್ತು ರಾಜಕೀಯ ನೆಲೆಗಟ್ಟಿನಲ್ಲಿ ಪರಿಶೀಲಿಸಿ ಸಮಯೋಚಿತ ಅವಶ್ಯಕ ಕ್ರಮ ತೆಗೆದುಕೊಳ್ಳಲು ಸಹಾಯಕವಾಗುವಂತೆ ಸಚಿವರೊಬ್ಬರಿಗೆ ವಹಿಸಲು ಸರ್ಕಾರವು ನಿರ್ದರಿಸಿದೆ. ಆದ್ದರಿಂದ ಈ ಆದೇಶ.
ಪುಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಹಾಗೂ ನದಿಗಳಿಗೆ ಸಂಬಂಧಿಸಿದ ವಿವಾದಗಳ ವಿಷಯದ ಬಗ್ಗೆ ನಿರಂತರವಾಗಿ ಪರಿವೀಕ್ಷಿಸಲು ಶ್ರೀ ಹೆಚ್.ಕೆ. ಪಾಟೀಲ್, ಮಾನ್ಯ ಕಾನೂನು, ನ್ಯಾಯ ಶಾಸನ ರಚನೆ ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವರು, ಇವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ವಹಿಸಲಾಗಿದೆ.
