ಬೆಂಗಳೂರು : ನಟಿ, ಮಾಜಿ ಸಚಿವೆ ಉಮಾಶ್ರೀಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
2019 ರಲ್ಲಿ ಬನಹಟ್ಟಿ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ರದ್ದುಗೊಳಿಸುವಂತೆ ನಟಿ , ಮಾಜಿ ಸಚಿವೆ ಉಮಾಶ್ರೀ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಮಾಜಿ ಸಚಿವೆ ಉಮಾಶ್ರೀ ವಿರುದ್ಧದ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.