ಬೆಳಗಾವಿ : ಕೌಟುಂಬಿಕ ಕಲಹದಿಂದ ಮನನೊಂದು ತಾಯಿಯೊಬ್ಬಳು ತನ್ನ 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರಿನಲ್ಲಿ ನಡೆದಿದೆ.
ಹೌದು 17 ತಿಂಗಳ ಮಗುವಿನೊಂದಿಗೆ ಬಾವಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರಿನಲ್ಲಿ ಘಟನೆ ನಡೆದಿದ್ದು, ತನ್ನ 17 ತಿಂಗಳ ಹಸೂಗೂಸಾದ ಕುಶಾಲ್ ನೊಂದಿಗೆ ಗಾಯತ್ರಿ ವಾಗಮೊರೆ (26) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ತಿಳಿದುಬಂದಿದೆ.ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕದಲ್ಲಿ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ, ತಾಯಿ ಮತ್ತು ಮಗುವಿನ ಶಿವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.