ಬೆಂಗಳೂರು : ಬೆಂಗಳೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, KSRTC ಬಸ್ ಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಬೆಳಿಗ್ಗೆ 4ಗಂಟೆಗೆ ನಡೆದಿದೆ.
ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ನಸುಕಿನ ಜಾವ 4 ಗಂಟೆಗೆ ಈ ಒಂದು ಅಪಘಾತ ಸಂಭವಿಸಿದೆ. ಬೈಕ್ ಸವಾರ ಮೊಹಮ್ಮದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಕೆಎಸ್ಆರ್ಟಿಸಿ ಬಸ್ ಗೆ ಹಿಂಬದಿಯಿಂದ ವೇಗವಾಗಿ ಬಂದಂತಹ ಬೈಕ್ ಡಿಕ್ಕಿಯಾಗಿ ಮಹಮ್ಮದ್ ಅಜರ್ ಸಾವನ್ನಪ್ಪಿದ್ದು, ಸದ್ಯ ಮೊಹಮ್ಮದ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಅಪಘಾತದ ಕುರಿತು ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.