ಬೆಂಗಳೂರು : ಬೆಂಗಳೂರಿನಲ್ಲಿ ಯುವ ರಂಗಭೂಮಿ ಕಲಾವಿದ ಮುರಳಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಿರುಚಿತ್ರಗಳಲ್ಲಿಯೂ ನಟಿಸಿದ್ದ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಈ ಘಟನೆ ಕನ್ನಡ ರಂಗಭೂಮಿ ವಲಯದಲ್ಲಿ ತೀವ್ರ ಆಘಾತ ಉಂಟು ಮಾಡಿದೆ.
ಹೌದು ರಂಗಭೂಮಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಯುವ ಕಲಾವಿದ ಮುರಳಿ ಎಂಬಾತ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ ಸಾರಕ್ಕಿ ಸಮೀಪದ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ಮುರಳಿ ಅವರು ರಂಗಭೂಮಿಯಲ್ಲಿ ಸಕ್ರಿಯರಾಗಿದ್ದು, ಕೆಲ ಕಿರುಚಿತ್ರಗಳಲ್ಲಿ ನಟಿಸುವ ಮೂಲಕವೂ ಗಮನಸೆಳೆದಿದ್ದರು. ಕಲೆಯ ಮೇಲಿನ ಅಪಾರ ಆಸಕ್ತಿ ಹೊಂದಿದ್ದ ಅವರು, ತಮ್ಮ ಅಭಿನಯದ ಮೂಲಕ ಸ್ನೇಹಿತರು ಹಾಗೂ ಸಹ ಕಲಾವಿದರ ಮನಸ್ಸಿನಲ್ಲಿ ವಿಶೇಷ ಸ್ಥಾನ ಗಳಿಸಿದ್ದರು. ಕಿರಣ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








