ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿದಿರುವ ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ. ಚಾಲಕ ಬಸವಂತ ಕಡಲೇಕರ್ (32) ಎನ್ನುವವರಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿರುವ ಘಟನೆ ವರದಿಯಾಗಿದೆ.
ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿಯಾಗಿರುವ ಬಸವಂತ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಕಾರು ಚಾಲಕ ಆಗಿದ್ದಾರೆ. ಬೈಕ್ ಮೇಲೆ ಬಂದು ಇಬ್ಬರೂ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ನಿಲ್ಲಿಸಿ ಕೆಳಗೆ ನಿಂತಿದ್ದ ಬಸವಂತನ ಮೇಲೆ ಏಕಾಏಕಿ ಚಾಕುವಿನಿಂದ ಇರಿದಿದ್ದಾರೆ. ಎದೆ ಪೂಜಾ ಸಿರಿಗಂತೆ 4 ಕಡೆ ಚಾಕು ಇರಿದು ಕಿಡಿಗೇಡಿಗಳು ಎಸ್ಕೇಪ್ ಆಗಿದ್ದಾರೆ.
ತಕ್ಷಣ ಬಸವಂತ ನಾನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಕ್ಷಣ ಬಸವಣ್ಣನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಡಿಸಿಪಿ ನಾರಾಯಣ ಬರಮಣಿ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಭೇಟಿ ನೀಡಿದ್ದಾರೆ. ಮೃಣಾಲ್ ಹೆಬ್ಬಾಳ್ಕರ್ ಅವರು ಸಹ ಆಗಮಿಸಿದ್ದಾರೆ. ಪ್ರಾಥಮಿಕ ವರದಿಯ ಪ್ರಕಾರ ಹಣಕಾಸಿನ ವಿಚಾರಕ್ಕೆ ಗಲಾಟೆ ಆಗಿ ಕಿಡಿಗೇಡಿಗಳು ಚಾಕು ಇರಿದಿದ್ದಾರೆ ಎಂದು ತಿಳಿದುಬಂದಿದೆ.








