ಬೆಳಗಾವಿ : ಒಂದೆಡೆ ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತ ಪಾಕಿಸ್ತಾನದ ಮೇಲೆ ದಾಳಿ ನಡೆಸಿ ಉಗ್ರರ ನೆಲೆಗಳನ್ನು ನಾಶ ಮಾಡಿದೆ. ಅಲ್ಲದೆ ನೂರಕ್ಕೂ ಅಧಿಕ ಉಗ್ರರನ್ನು ಹತ್ಯೆಗೈದಿದೆ. ಇದರ ಮಧ್ಯ ಮಸೀದಿಯಲ್ಲಿದ್ದ ಕುರಾನ್ ಪುಸ್ತಕ ಕದ್ದೊಯ್ದು ಸುಟ್ಟು ಹಾಕಿರುವ ಘಟನೆ ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ನಡೆದಿದೆ.
ಹೌದು ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದ ನಿರ್ಮಾಣ ಹಂತದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ. ಇಂದು ಪ್ರಾರ್ಥನೆಗೆಂದು ಬಂದಾಗ ಕುರಾನ್, ಹದೀಸ್ ಇಲ್ಲದಿರುವುದು ಬೆಳಕಿಗೆ ಬಂದಿದೆ. ಪ್ರಾರ್ಥನೆ ಮುಗಿಸಿದ ಬಳಿಕ ಸುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಸುಟ್ಟು ಹಾಕಿರುವುದು ಕಂಡುಬಂದಿದೆ. ಇದೀಗ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಿಸಿದ ಬಳಿಕ ಇಂದು ಎರಡು ದೇಶದ DGMO ಮಹತ್ವದ ಸಭೆ ನಡೆಸಿದರು. ಇದಕ್ಕೂ ಮುನ್ನ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕುರಿತಂತೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಆಪರೇಷನ್ ಸಿಂಧೂರ್ ಕುರಿತಂತೆ ಹಾಗೂ ಉಗ್ರರನ್ನು ಹತ್ಯೆಗೈದಿರುವ ಪಾಕಿಸ್ತಾನದ ವಾಯುನೆಲೆಗಳನ್ನು ಧ್ವಂಸಗೊಳಿಸಿರುವ ಕುರಿತಂತೆ ಫೋಟೋ ಹಾಗೂ ವಿಡಿಯೋಗಳನ್ನು ಸಾಕ್ಷಿ ಸಮೇತ ರಿಲೀಸ್ ಮಾಡಿದರು.