ಬೆಳಗಾವಿ : ಬೆಳಗಾವಿಯಲ್ಲಿ ಸರ್ಕಾರಿ ಬಸ್ ನಲ್ಲಿ ಮಹಿಳೆಯರು ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ರೇಣುಕಾ ಯಲ್ಲಮ್ಮ ದರ್ಶನಕ್ಕೆ ಹೋಗುತ್ತಿದ್ದ ವೇಳೆ ಸೀಟ್ ವಿಚಾರವಾಗಿ ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.
ಸೀಟ್ ನನ್ನದು, ಸೀಟ್ ನನ್ನದು ಅಂತ ಮಹಿಳೆಯರು ಪರಸ್ಪರ ಜುಟ್ಟು ಹಿಡಿದುಕೊಂಡು ಚಪ್ಪಲಿಯಿಂದ ಹೊಡೆದಾಡಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.