Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
BREAKING NEWS

BREAKING : ಪಶ್ಚಿಮ ಏಷ್ಯಾ ಬಿಕ್ಕಟ್ಟು : ನಾಳೆ ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

24/03/2026 12:58 PM

ಸಶಸ್ತ್ರ ಪಡೆಗಳಲ್ಲಿ ಮಹಿಳೆಯರಿಗೆ ‘ಪರ್ಮನೆಂಟ್ ಕಮಿಷನ್’ ಕಡ್ಡಾಯ: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು; ಲಿಂಗ ತಾರತಮ್ಯಕ್ಕೆ ಬ್ರೇಕ್!

24/03/2026 12:49 PM

ಗೋವಾ ಸಮುದ್ರಕ್ಕೆ ಫಾರ್ಚುನರ್ ಇಳಿಸಿದ ಪ್ರವಾಸಿಗ : ಅಲೆಗಳ ಅಬ್ಬರಕ್ಕೆ ಸಿಲುಕಿದ ಕಾರು |WATCH VIDEO

24/03/2026 12:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಕೇಸ್ : ಮೂವರು ಅಪ್ರಾಪ್ತರು ವಶಕ್ಕೆ
KARNATAKA

BREAKING : ಬೆಂಗಳೂರಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಕೇಸ್ : ಮೂವರು ಅಪ್ರಾಪ್ತರು ವಶಕ್ಕೆ

By kannadanewsnow0505/01/2026 9:10 AM

ಬೆಂಗಳೂರು : ಮಂಡ್ಯ ಬಳಿಕ ಇದೀಗ ಬೆಂಗಳೂರಲ್ಲಿ ಕಿಡಿಗೇಡಿಗಳಿಂದ ಮತ್ತೆ ಕಲ್ಲು ತೂರಾಟ ನಡೆದಿದ್ದು, ದೇವಿಯ ತೇರು ಎಳೆಯುತ್ತಿರುವ ವೇಳೆ ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿರುವ ಘಟನೆ ಚಾಮರಾಜಪೇಟೆ ಬಳಿಯ ಜೆ.ಜೆ.ನಗರ (ಜಗಜೀವನ್ ರಾಮ್ ನಗರ) ಠಾಣೆವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ.

ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಓಂ ಶಕ್ತಿ ಅಧ್ಯಕ್ಷ ಶಶಿಕುಮಾರ್ ಅವರು ನೀಡಿದ ದೂರಿನ ಮೇರೆಗೆ FIR ದಾಖಲಾಗಿದೆ. ಎಫ್ ಐ ಆರ್ ದಾಖಲಾಗುತ್ತಿದ್ದಂತೆ ಇಡೀ ಏರಿಯಾ ಸಂಪೂರ್ಣವಾಗಿ ಸೈಲೆಂಟ್ ಆಗಿದ್ದು ಘಟನೆಗೆ ಸಂಬಂಧಿಸಿದಂತೆ ಇದೀಗ ಜೆಜೆ ಠಾಣೆ ಪೊಲೀಸರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ.

ಜೆ.ಜೆ.ನಗರದ ವಿ.ಎಸ್. ಗಾರ್ಡನ್‌ ಓಂ ಶಕ್ತಿ ದೇವಸ್ಥಾನದ ಬಳಿ ಭಾನುವಾರ ರಾತ್ರಿ 8 ಗಂಟೆಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ವರದರಾಜು ಎಂಬುವರ ಅಪ್ರಾಪ್ತ ಮಗಳ ತಲೆಗೆ ಗಂಭೀರವಾದ ಗಾಯವಾಗಿದೆ. ಜತೆಗೆ ಇಬ್ಬರು ಮಹಿಳೆಯ ಕಾಲಿಗೆ ಗಾಯವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಜೆ.ಜೆ ನಗರ ಠಾಣೆ ಪೊಲೀಸರು ಮತ್ತು ಎಸಿಪಿ ಭರತ್‌ರೆಡ್ಡಿ ಸೇರಿ ಹಿರಿಯ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯಿಂದ ಸಿಡಿದೆದ್ದಿರುವ ಓಂ ಶಕ್ತಿ ಮಾಲಾಧಾರಿಗಳು ಮತ್ತು ನೂರಾರುಸ್ಥಳೀಯರು ಜೆ.ಜೆ ನಗರ ಠಾಣೆ ಮುಂದೆ ಜಮಾಯಿಸಿ ಕಲ್ಲು ತೂರಿದವರ ವಿರುದ್ಧ ಕಠಿಣ ಕ್ರಮಜರುಗಿಸಬೇಕೆಂದು ಆಗ್ರಹಿಸಿಪ್ರತಿಭಟನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ದೇವಾಲಯದ ಮುಂದೆ ಹಾಗೂ ಜೆ.ಜೆ ನಗರ ಠಾಣೆ ಮುಂದೆ ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿತ್ತು. ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ಸ್ಥಳದಿಂದ

ತೆರಳುವಂತೆ ಸೂಚಿಸಿದರು. ಪೊಲೀಸರ ಸೂಚ ನೆಗೆ ಜಗ್ಗದೇ ನೂರಾರು ಮಂದಿ ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಘೋಷಣೆಗಳನ್ನು ಕೂಗಿ ದ್ದರು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.ಸ್ಥಳದಲ್ಲಿಕೆಲಕಾಲಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಘಟನೆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೆ, ಆರೋಪಿಗಳ ಬಂಧನಕ್ಕೆ ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಸೂಚಿಸಿದ್ದಾರೆ. ಮತ್ತೊಂದೆಡೆ ಠಾಣೆಮುಂಭಾಗಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಓಂಶಕ್ತಿ ಮಾಲಾಧಾರಿಗಳಿಗೆ ಪ್ರತಿಭಟನೆ ಕೈ ಬಿಡುವಂತೆ ಮನವೊಲಿಕೆ ಮಾಡಿದರು.

ದೇವಿಯ ತೇರು ಎಳೆಯುತ್ತಿರುವ ವೇಳೆ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಅಪ್ರಾಪ್ತ ಬಾಲಕರು ಕಲ್ಲು ತೂರಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಈ ಸಂಬಂಧ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಜೆ.ಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ವನ್ಯಜೀವಿಗಳ ಅಂಗಾಂಗ,ಟ್ರೋಫಿಗೆ ಪರವಾನಗಿ ಅವಕಾಶವಿಲ್ಲ : ಸಚಿವ ಈಶ್ವರ ಖಂಡ್ರೆ

24/03/2026 12:30 PM1 Min Read

ರಾಜ್ಯದಲ್ಲಿ ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ, ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ : ಸಚಿವ ಈಶ್ವರ ಖಂಡ್ರೆ

24/03/2026 12:04 PM1 Min Read

ALERT : ಬೇಸಿಗೆಯಲ್ಲಿ `ಬಿಯರ್’ ಕುಡಿಯುತ್ತೀರಾ ? ಈ ಆರೋಗ್ಯ ಸಮಸ್ಯೆಗಳು ಬರಬಹುದು ಎಚ್ಚರ !

24/03/2026 11:39 AM2 Mins Read
Recent News
BREAKING NEWS

BREAKING : ಪಶ್ಚಿಮ ಏಷ್ಯಾ ಬಿಕ್ಕಟ್ಟು : ನಾಳೆ ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

24/03/2026 12:58 PM

ಸಶಸ್ತ್ರ ಪಡೆಗಳಲ್ಲಿ ಮಹಿಳೆಯರಿಗೆ ‘ಪರ್ಮನೆಂಟ್ ಕಮಿಷನ್’ ಕಡ್ಡಾಯ: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು; ಲಿಂಗ ತಾರತಮ್ಯಕ್ಕೆ ಬ್ರೇಕ್!

24/03/2026 12:49 PM

ಗೋವಾ ಸಮುದ್ರಕ್ಕೆ ಫಾರ್ಚುನರ್ ಇಳಿಸಿದ ಪ್ರವಾಸಿಗ : ಅಲೆಗಳ ಅಬ್ಬರಕ್ಕೆ ಸಿಲುಕಿದ ಕಾರು |WATCH VIDEO

24/03/2026 12:39 PM

ವನ್ಯಜೀವಿಗಳ ಅಂಗಾಂಗ,ಟ್ರೋಫಿಗೆ ಪರವಾನಗಿ ಅವಕಾಶವಿಲ್ಲ : ಸಚಿವ ಈಶ್ವರ ಖಂಡ್ರೆ

24/03/2026 12:30 PM
State News
KARNATAKA

ವನ್ಯಜೀವಿಗಳ ಅಂಗಾಂಗ,ಟ್ರೋಫಿಗೆ ಪರವಾನಗಿ ಅವಕಾಶವಿಲ್ಲ : ಸಚಿವ ಈಶ್ವರ ಖಂಡ್ರೆ

By kannadanewsnow5724/03/2026 12:30 PM KARNATAKA 1 Min Read

ಬೆಂಗಳೂರು : ವನ್ಯಜೀವಿಗಳ ಅಂಗಾಂಗ, ಟ್ರೋಫಿ ಇತ್ಯಾದಿಗಳನ್ನು ಇಟ್ಟುಕೊಳ್ಳಲು ಪರವಾನಗಿ ನೀಡಲು ಅವಕಾಶ ಇಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…

ರಾಜ್ಯದಲ್ಲಿ ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ, ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ : ಸಚಿವ ಈಶ್ವರ ಖಂಡ್ರೆ

24/03/2026 12:04 PM

ALERT : ಬೇಸಿಗೆಯಲ್ಲಿ `ಬಿಯರ್’ ಕುಡಿಯುತ್ತೀರಾ ? ಈ ಆರೋಗ್ಯ ಸಮಸ್ಯೆಗಳು ಬರಬಹುದು ಎಚ್ಚರ !

24/03/2026 11:39 AM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ !

24/03/2026 11:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.