ಬೆಂಗಳೂರು : ಬೆಂಗಳೂರಲ್ಲಿ ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಪಿಎ ಚಂದ್ರು ಅವರ ಪತ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯಲ್ಲಿ ನೇಣು ಬಿಗಿದುಕೊಂಡು ಚಂದ್ರು ಪುತ್ರ ಹೇಮಂತ್ (20) ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬೆಂಗಳೂರಿನ ಸಂಜಯನಗರದ ಲೊಟ್ಟೆ ಗೊಲ್ಲಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಹೇಮಂತ್ ಆತ್ಮಹತ್ಯೆಗೆ ಕಾರಣ ನಿಗೂಢವಾಗಿದೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗೆ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಹೇಮಂತ್ ಶವ ರವಾನಿಸಲಾಗಿದೆ.








