ಬೆಂಗಳೂರು : ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಲ್ಲದೇ ಅವರ ಪುತ್ರ ನಲಪಾಡ್ ಮನೆಯ ಮೇಲೆ ಇಡಿ ದಾಳಿ ಮಾಡಿದೆ. ಬೆಂಗಳೂರಿನ 17 ಸ್ಥಳಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ
ಕಾಂಗ್ರೆಸ್ ಶಾಸಕರಾಗಿರುವ ಹರೀಶ್ ಮನೆಯ ಮೇಲೆ ಇಡೀ ದಾಳಿ ಮಾಡಿದ್ದು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ದಾಳಿ ನಡೆಸಿದೆ.ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ಜಾರಿ ನಿರ್ದೇಶನಾಲಯ (ED) ಬಿಗಿ ಸಂಕಷ್ಟ ತಂದೊಡ್ಡಿದೆ. ಇಂದು ಬೆಳ್ಳಂಬೆಳಿಗ್ಗೆ ಶಾಸಕ ಹ್ಯಾರಿಸ್ ಮತ್ತು ಅವರ ಪುತ್ರ, ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರ ನಿವಾಸಗಳು ಸೇರಿದಂತೆ ಬೆಂಗಳೂರಿನ ಒಟ್ಟು 17 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.








