ಬೀದರ್ : ವಿದ್ಯಾರ್ಥಿನಿಗೆ ಆಕೆಯ ಸಹಪಾಠಿಗೆ ನನ್ನನ್ನು ಪ್ರೀತಿಸು ಅಂತ ಕಿರುಕುಳ ನೀಡಿದ್ದಾನೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಶಾಲಾ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದ ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ಭೆಮಳಖೇಡ ಗ್ರಾಮದ ಶಾಲೆಯೊಂದರಲ್ಲಿ ಹತ್ತನೇ ತರಗತಿ ಓದುತ್ತಿದ್ದರುವುದಾಗಿ ತಿಳಿದುಬಂದಿದೆ.
ಸಹಪಾಠಿಯಿಂದ ಲವ್ ಮಾಡುವಂತೆ ಚುಡಾಯಿಸಿದಕ್ಕೆ ಹಾಗೂ ಪ್ರೀತಿಸುವಂತೆ ಒತ್ತಡ ಹಾಕಿದ್ದಕ್ಕೆ ಶಾಲಾ ಕಟ್ಟಡದ ಮೇಲಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.








