ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು 10 ವರ್ಷದ ಬಾಲಕಿಯನ್ನು ಬೆದರಿಸಿ 1 ವರ್ಷದಿಂದ ನಿರಂತರವಾಗಿ ಇಬ್ಬರು ಸಾಮೂಹಿಕವಾಗಿ ಅತ್ಯಾಚಾರ ಎಸೆಗಿರುವ ಘೋರ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದಿದೆ.
ಕಳೆದ ಒಂದು ವರ್ಷದಿಂದ 24 ವರ್ಷದ ಹಾಗೂ 40 ವರ್ಷದ ಇಬ್ಬರು ವ್ಯಕ್ತಿಗಳು ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಅತ್ಯಾಚಾರ ಎಸಗಿದ್ದ ಬಳಿಕ ಈ ವಿಷಯ ಯಾರಿಗಾದರೂ ಹೇಳಿದರೆ ನಿನ್ನನ್ನು ಮತ್ತು ನಿನ್ನ ತಾಯಿಯನ್ನು ಕೊಲೆ ಮಾಡುತ್ತಿವೆ ಎಂದು ಬೆದರಿಸಿದ್ದಾರೆ. ಬಳಿಕ ಈ ವಿಚಾರ ಬಾಲಕಿ ಶಾಲೆಯಲ್ಲಿ ತಮ್ಮ ಶಿಕ್ಷಕರಿಗೆ ತಿಳಿಸಿದ್ದು ಶಿಕ್ಷಕಿ ಪೋಷಕರಿಗೆ ತಿಳಿಸಿದಾಗ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ.








