ದಕ್ಷಿಣಕನ್ನಡ : ದಕ್ಷಿಣಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ಹಾಗು ಲಾರಿ ಪರಸ್ಪರ ಡಿಕ್ಕಿಯಾಗಿ ಇಬ್ಬರು ಚಾಲಕರು ಸೇರಿದಂತೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಗುಂಡ್ಯದಲ್ಲಿ ನಡೆದಿದೆ.
ಅಪಾಯಕಾರಿ ತಿರುವಿನಲ್ಲಿ ಎದುರುನಿಂದ ವೇಗವಾಗಿ ಲಾರಿ ಬರುತ್ತಿತ್ತು ಈ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಬಸಕ್ಕೆ ಕೆಎಸ್ಆರ್ಟಿಸಿ ಬಸ್ ಹಾಗು ಲಾರಿಯ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಲಾರಿ ಮತ್ತು ಬಸ್ ಚಾಲಕರ ಸ್ಥಿತಿ ಗಂಭೀರವಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಅಪಘಾತದ ಕುರಿತಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ