ದಾವಣಗೆರೆ : ಇಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಲಿದ್ದಾರೆ. ಇಂದು ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ. ಬಳಿಕ ನಾಳೆ ಭಾಗಿಧಾರಿ ನ್ಯಾಯ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಡಿಸೆಂಬರ್ ನಲ್ಲಿ ಸಿಎಂ ಅಗಲಿದ್ದಾರೆ ಎಂದು ಮತ್ತೊಬ್ಬ ಕಾಂಗ್ರೆಸ್ ಶಾಸಕ ಹೇಳಿಕೆ ನೀಡಿದ್ದಾರೆ.
ಹೌದು ಶಾಸಕ ಶಿವಗಂಗಾ ಬಸವರಾಜ್ ಅವರು ಸದ್ಯ ಅನಾರೊಗ್ಯ ಹಿನ್ನೆಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೊರಗೆ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಡಿಸೆಂಬರ್‌ವರೆಗೆ ಇನ್ನೂ ಸಮಯವಿದೆ ಎಂದು ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗಾ ಹೇಳಿದರು. ಈ ಮೂಲಕ ಡಿಕೆಶಿಗೆ ಮುಖ್ಯಮಂತ್ರಿ ಪಟ್ಟ ಎಂದು ಡಿಕೆಶಿ ಆಪ್ತ ಬಳಗದ ಶಾಸಕ ಶಿವಗಂಗಾ ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಐದು ವರ್ಷದಲ್ಲಿ ಡಿಸೆಂಬರ್ ಸಹ ಇದೆಯಲ್ಲವೇ? ಕಾದು ನೋಡಿ ಅಷ್ಟೇ. ಎಲ್ಲರೂ ಒಗ್ಗಟ್ಟಾಗಿದ್ದರೆ ಏನೂ ಸಮಸ್ಯೆ ಇಲ್ಲ. ನಮ್ಮ ಪಕ್ಷದಲ್ಲಿ ವಾಕ್ ಸ್ವಾತಂತ್ರ್ಯವಿದೆ. ಬಿಜೆಪಿ ರೀತಿಯ ಪರಿಸ್ಥಿತಿ ನಮ್ಮಲ್ಲಿಲ್ಲವೆಂದು ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಶಾಸಕರ ಬಾಯಿಗೆ ಬೀಗ ಹಾಕಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು.