ಧಾರವಾಡ : ಮಾಜಿ ಶಾಸಕ ಬಾಬುರಾವ್ ಬೋಳ ಶೆಟ್ಟಿ ಪುತ್ರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಕಾರಿನಲ್ಲಿಯೇ ಸುಟ್ಟ ಸ್ಥಿತಿಯಲ್ಲಿ ರಾಜು ಬೋಳಶೆಟ್ಟಿ (53) ಶವ ಪತ್ತೆಯಾಗಿದೆ. ಧಾರವಾಡ ತಾಲೂಕಿನ ರಾಮಾಪುರ ಬಳಿಯ ಅರಣ್ಯದಲ್ಲಿ ಈ ಒಂದು ಘಟನೆ ನಡೆದಿದೆ.
ರಾಜು ಬೋಳಶೆಟ್ಟಿ ಕೊಲೆ ಮಾಡಿ ದುಷ್ಕರ್ಮಿಗಳು ಕಾರಿನಲ್ಲಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಉಡಗೇರಿ ನಿವಾಸಿ ಆಗಿರುವ ರಾಜು ಬೋಳಶೆಟ್ಟಿ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಪುತ್ರ ಆಗಿದ್ದಾರೆ. ನಿರ್ಜನ ಪ್ರದೇಶದಲ್ಲಿ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗುತ್ತಿದ್ದು, ಸ್ಥಳಕ್ಕೆ ಧಾರವಾಡ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








