ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಕಾರು ಬಿದ್ದ ಪರಿಣಾಮ ಕಾರಿನಲ್ಲಿದ್ದ ತಾಯಿ ಹಾಗು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಮಲ್ಲನಘಟ್ಟ ಬಳಿ ನಡೆದಿದೆ.
ಪ್ರಿಯಾಂಕಾ (30) ಹಾಗು ಒಂದೂವರೆ ವರ್ಷದ ಮಗು ವೈಭವ್ ಸಾವನ್ನಪ್ಪಿದ್ದರೆ.ಮೃತರು ದೇವನಹಳ್ಳಿ ನಿವಾಸಿಯಾಗಿದ್ದು, ಧರ್ಮಸ್ಥಳಕ್ಕೆ ಹೋಗಿ ಹಿಂದಿರುಗುವಾಗ ಈ ಅಪಘಾತ ಸಂಭವಿಸಿದೆ. ಗಾಯಳುಗಳಿಗೆ ಚನ್ನರಾಯಪಟ್ಟಣ ತಾಲೂಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








