ಹಾಸನ : ಹಾಸನದಲ್ಲಿ ಘೋರ ಘಟನೆ ನಡೆದಿದ್ದು, ಬಾಣನಕೆರೆ ಗ್ರಾಮದಲ್ಲಿ ಹೆಜ್ಜೆನು ದಾಳಿಗೆ ಯುವಕನೊಬ್ಬ ಬಲಿಯಾಗಿದ್ದಾನೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಾಣನಕೆರೆ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಮೃತ ಯುವಕನನ್ನು ಬಿಕೆ ಚರಣ್ (30) ಎಂದು ತಿಳಿದು ಬಂದಿದೆ.
ಚರಣ್ ತಂದೆ ಕುಮಾರ್ ಅವರಿಗೂ ಗಂಭೀರವಾದ ಗಾಯಗಳಾಗಿದ್ದು, ಅವರ ಸ್ಥಿತಿ ಗಂಭಿರವಾಗಿದೆ. ಮೊನ್ನೆ ತಂದೆ ಜೊತೆ ಚರಣ್ ಜಮೀನಿಗೆ ತೆರಳಿದ್ದ ಈ ವೇಳೆ ಹೆಜ್ಜೆನು ದಾಳಿ ಮಾಡಿದೆ. ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ನಿನ್ನೆ ಬಿಕೆ ಚರಣ್ ಮೃತಪಟ್ಟಿದ್ದಾನೆ. ಘಟನೆ ಕುರಿತಂತೆ ನುಗ್ಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.