ಹಾಸನ : ಹಾಸನದಲ್ಲಿ ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ನಿಂದ ಕಿರುಕುಳ ಆರೋಪ ಹಿನ್ನೆಲೆ, ಕೆಎಸ್ಆರ್ಟಿಸಿ ಬಸ್ ಡ್ರೈವರ್ ಕಂ ಕಂಡಕ್ಟರ್ ಹರೀಶ್ ಎನ್ನುವವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ಚಾಲಕರ ವಿಶ್ರಾಂತಿ ಕೊಠಡಿಯಲ್ಲಿ ವಿಷ ಕುಡಿದು ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಡಿಪೋ ಮ್ಯಾನೇಜರ್ ಶಾಜಿಯಾ ಬಾನು ವಿರುದ್ಧ ಈ ಒಂದು ಕಿರುಕುಳ ಆರೋಪ ಕೇಳಿ ಬಂದಿದ್ದು, ಕೆಲಸದ ವಿಷಯವಾಗಿ ಹರೀಶ್ ಮತ್ತು ಶಾಜಿಯ ಭಾನು ನಡುವೆ ವಾಗ್ವಾದ ನಡೆದಿದೆ. ನಂತರ ವಿಶ್ರಾಂತಿ ಕೊಠಡಿಗೆ ಹೋಗಿ ಹರೀಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ಹರೀಶ್ ಗೆ ಬೇಲೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸ್ಥಳಕ್ಕೆ ಶಾಸಕ ಎಚ್. ಕೆ ಸುರೇಶ್ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.