ಹಾಸನ : ಹಲ್ಲಿ ಬಿದ್ದ ಊಟ ಮಾಡಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಹಾಸನದ ಸಾರಾಪುರದ ಕೃಷಿ ವಿಜ್ಞಾನ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ. ಸುಮಾರು 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಅದರಲ್ಲಿ 6 ವಿದ್ಯಾರ್ಥಿನಿಯರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ.
ಆ ವಿದ್ಯಾರ್ಥಿನಿಯರಿಗೆ ಹಾಸನದ ಹಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ನಿನ್ನೆ ರಾತ್ರಿ ಊಟ ಮಾಡುವ ಸಂದರ್ಭದಲ್ಲಿ ಸಾಂಬರ್ ನಲ್ಲಿ ಹಲ್ಲಿ ಪತ್ತೆಯಾಗಿದೆ ಸಿಲಿಂಡರ್ ಕೊರತೆಯಿಂದ ಹೊರಗಡೆ ಸೌದೆ ಒಲೆಯಲ್ಲಿ ಅಡುಗೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಹಲ್ಲಿ ಸಾಂಬಾರಲ್ಲಿ ಬಿದ್ದಿರಬಹುದು ಎಂದು ಸಿಬ್ಬಂದಿಗಳು ತಿಳಿಸಿದ್ದಾರೆ.








